ಬೆಂಗಳೂರು :ಹೈಕೋರ್ಟ್ ಚಾಟಿ ಬೀಸಿದ್ದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಜೂನ್ 6ರೊಳಗೆ ನಗರದ ರಸ್ತೆಗಳ ಗುಂಡಿ ಮುಚ್ಚುತ್ತೇವೆ ಎಂದು ಡೆಡ್‌ಲೈನ್ ಘೋಷಿಸಿದೆ. ಪಾಲಿಕೆ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಕಳೆದ ಒಂದು ವಾರದಿಂದ ಸುಮಾರು 5 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಅವರು ಇದೇ ವೇಳೆ ತಿಳಿಸಿದರು.
ಜೂನ್ 6ರೊಳಗೆ ಬೆಂಗಳೂರು ನಗರದ ರಸ್ತೆಗಳು ಗುಂಡಿ ಮುಕ್ತ : ಬಿಬಿಎಂಪಿ ಮುಖ್ಯ ಆಯುಕ್ತ - ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು ನಗರದ ರಸ್ತೆಗಳನ್ನು ಜೂನ್ 6ರೊಳಗೆ ಗುಂಡಿ ಮುಕ್ತ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು..
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಫೈಥಾನ್ ಯಂತ್ರದ ಸಹಾಯ :ನಗರದಲ್ಲಿ 50 ಪರ್ಸೆಂಟ್ ಗುಂಡಿಗಳನ್ನು ಮುಚ್ಚಿದ್ದೇವೆ. ಉಳಿದ ಗುಂಡಿಗಳನ್ನು ಫೈಥಾನ್ ಯಂತ್ರದ ಸಹಾಯದಿಂದ ನಗರದ ಹಲವು ಭಾಗಗಳಲ್ಲಿ ಗುಂಡಿ ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಮಳೆ ಬರುತ್ತಿರುವ ಹಿನ್ನೆಲೆ ಸ್ವಲ್ಪ ತಡವಾಗುತ್ತಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ:ಒಂದೇ ದಿನ 5 ಸಾವಿರ ಗುಂಡಿಗಳನ್ನು ಮುಚ್ಚಿದ ಪಾಲಿಕೆ