ಬೆಂಗಳೂರು:ವ್ಯಕ್ತಿಯೋರ್ವ ವೇಗವಾಗಿ ಬೆಂಜ್ ಕಾರು ಚಲಾಯಿಸಿದ ಪರಿಣಾಮ ಮುಂದೆ ಹೋಗುತ್ತಿದ್ದ ವಾಹನಗಳಿಗೆ ಡಿಕ್ಕಿಯಾಗಿ ಸರಣಿ ಅಪಘಾತವಾಗಿರುವ ಘಟನೆ ಹಲಸೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.
ಹಲಸೂರು ಟ್ರಾಫಿಕ್ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಅಸಲಿಯತ್ತು ಬಯಲಾಗಿದೆ. ಸಣ್ಣ ಅಪಘಾತದಿಂದ ತಪ್ಪಿಸಿಕೊಳ್ಳಲು ಹೋದ ಕಾರು ಚಾಲಕ ಸುವೀದ್ ಭಯದಲ್ಲಿ ದೊಡ್ಡ ಅನಾಹುತ ಮಾಡಿದ್ದಾನೆ ಅನ್ನೋದು ತನಿಖೆ ವೇಳೆ ತಿಳಿದುಬಂದಿದೆ.
ವೇಗವಾಗಿ ಬೆಂಜ್ ಕಾರು ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಹೊಡೆದ ಪರಿಣಾಮ ಮುಂದಿನ ಎರಡು ಆಟೋ ಹಾಗೂ ಒಂದು ಮಿನಿ ಲಾರಿ ಮಧ್ಯೆ ಅಪಘಾತವಾಗಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿತ್ತು. ಬೆಂಜ್ ಕಾರನ್ನು ವೇಗವಾಗಿ ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದರು. ಹಲಸೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ತನಿಖೆಯಲ್ಲಿ ಕಂಡುಬಂದ ಅಂಶ: