ಕರ್ನಾಟಕ

karnataka

ETV Bharat / city

ಯುಪಿಯಲ್ಲಿ ಅಪಘಾತ, ಬೀದರ್​ನ 7 ಮಂದಿ ಸಾವು: ಸಂತ್ರಸ್ತರ ನೆರವಿಗೆ ಸಿಎಂ ಯೋಗಿ ಜೊತೆ ಬೊಮ್ಮಾಯಿ ಮಾತುಕತೆ - ರಸ್ತೆ ಅಪಘಾತ

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್​ನ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಯೋಗಿ ಆದಿತ್ಯನಾಥ್ ಜೊತೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

Bidar family road accident in Uttar Pradesh cm Bommai talk with up cm Yogi Adityanath
ಉತ್ತರ ಪ್ರದೇಶದಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ

By

Published : May 29, 2022, 5:17 PM IST

ಬೆಂಗಳೂರು: ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟು, 10 ಜನರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ ಘಟನೆ. ಸಂತ್ರಸ್ತರ ನೆರವಿಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ಮಾತುಕತೆ ನಡೆಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಪ್ರವಾಸಿಗರ ಸುರಕ್ಷತೆ, ಅವರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಈಗಾಗಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಮುಖ್ಯಮಂತ್ರಿಗಳು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಜೊತೆಗೆ ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಿಂದ ಅಯೋಧ್ಯೆಗೆ ಹೊರಟ ಟೆಂಪೋ ಅಪಘಾತ: 7 ಜನ ಸಾವು, 10 ಮಂದಿ ಗಂಭೀರ

ABOUT THE AUTHOR

...view details