ಬೆಂಗಳೂರು:ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ನಡೆಯುವ ವಿಧಾನ ಷರಿಷತ್ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಮುಂದೂಡಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದ್ದು, ಕೊರೊನಾ ವೈರಸ್ ಹಾಗೂ ಲಾಕ್ಡೌನ್ನಿಂದಾಗಿ ಚುನಾವಣಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ನಡೆಯಬೇಕಿದ್ದ ಪರಿಷತ್ ಚುನಾವಣೆ ಮುಂದೂಡಿಕೆ - ಪರಿಷತ್ ಚುನಾವಣೆ
ಕೊರೊನಾ ಹಾಗೂ ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ಪರಿಷತ್ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಿದೆ.
ಚುನಾವಣಾ ಆಯೋಗ
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಂಟಿ ಚುನಾವಣಾ ಅಧಿಕಾರಿ ಹೆಚ್.ಜ್ಞಾನೇಶ್ ಜೂನ್ 30ಕ್ಕೆ ನಾಲ್ಕು ಕ್ಷೇತ್ರಗಳ ಸದಸ್ಯರ ಅವಧಿ ಮುಗಿಯಲಿದ್ದು, ಕೊರೊನಾ ಹಾಗೂ ಲಾಕ್ಡೌನ್ ಪರಿಣಾಮದಿಂದಾಗಿ ಇದು ಚುನಾವಣೆಗೆ ಸಕಾಲವಲ್ಲ. ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಚುನಾವಣೆ ಮುಂದೂಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಮುಂದಿನ ದಿನಗಳಲ್ಲಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡುವುದಾಗಿ ಚುನಾವಣಾಧಿಕಾರಿ ಹೇಳಿದ್ದು, ಸದ್ಯಕ್ಕೆ ರಾಜಕೀಯ ಪಕ್ಷಗಳು ಸ್ವಲ್ಪ ನಿರಾಳವಾಗಿವೆ.