ಬೆಂಗಳೂರು :ದ್ವಿಚಕ್ರ ವಾಹನದಲ್ಲಿ ಮಾದಕವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿ, 10 ಲಕ್ಷ ರೂ. ಮೌಲ್ಯದ 21 ಕೆಜಿ 350 ಗ್ರಾಂ ಗಾಂಜಾ ಹಾಗೂ ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಗುಂಡೂರು ಭಾನುಪ್ರಕಾಶ್ ರೆಡ್ದಿ (22) ಮತ್ತು ನಿತಿನ್ (22) ಬಂಧಿತ ಆರೋಪಿಗಳಾಗಿದ್ದಾರೆ.
ಬೈಕ್ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆಂಧ್ರದ ಇಬ್ಬರು ಬಂಧನ.. ಲಕ್ಷಾಂತರ ಮೌಲ್ಯದ ಗಾಂಜಾ ವಶಕ್ಕೆ - ಬೆಂಗಳೂರು ಅಪರಾಧ ಸುದ್ದಿ
ಆರೋಪಿಗಳು ಹಲವೆಡೆ ಗಾಂಜಾ ಮಾರಾಟದ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ವಿಚಾರಣೆಯಿಂದ ತಿಳಿದು ಬಂದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ ಎಂದು ಸಂಜೀವ್ ಪಾಟೀಲ್ ತಿಳಿಸಿದ್ದಾರೆ..
ಸೋಮವಾರ ಬೆಳಗ್ಗೆ 9.45ರ ಸುಮಾರಿನಲ್ಲಿ ಆರೋಪಿಗಳಿಬ್ಬರು ಕಲಾಸಿಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾ ವಸ್ತು ಇಟ್ಟುಕೊಂಡು ಸಾರ್ವಜನಿಕರಿಗೆ ಹಾಗೂ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಗಸ್ತಿನಲ್ಲಿದ್ದ ಪಿಎಸ್‌ಐ ಪ್ರಸನ್ನರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಇನ್‌ಸ್ಪೆಕ್ಟರ್ ಚೇತನ್‌ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು ಎಂದು ಪ್ರಕರಣದ ಕುರಿತು ಪೂರ್ವ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಆರೋಪಿಗಳು ಹಲವೆಡೆ ಗಾಂಜಾ ಮಾರಾಟದ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ವಿಚಾರಣೆಯಿಂದ ತಿಳಿದು ಬಂದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ ಎಂದು ಸಂಜೀವ್ ಪಾಟೀಲ್ ತಿಳಿಸಿದ್ದಾರೆ.