ಕರ್ನಾಟಕ

karnataka

ETV Bharat / city

ನಿಯಂತ್ರಣ ಕಳೆದುಕೊಂಡ ಬಿಎಂಟಿಸಿ ಬಸ್ : ಬೈಕ್ ಸವಾರ ಸಾವು - ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಘಟನೆ ಸಂಬಂಧ ಮಲ್ಲೇಶ್ವರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ..

bmtc
ನಿಯಂತ್ರಣ ಕಳೆದುಕೊಂಡ ಬಿಎಂಟಿಸಿ ಬಸ್

By

Published : Jan 24, 2022, 1:59 PM IST

ಬೆಂಗಳೂರು :ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಆತ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌‌.

ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್ ಬಾಬು ಮೃತ ದುದೈರ್ವಿಯಾಗಿದ್ದು, ಇಂದು ಬೆಳಗ್ಗೆ ಸುಮಾರು 6.30ರ ವೇಳೆ ದುರ್ಘಟನೆ ಸಂಭವಿಸಿದೆ‌. ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆ ಬಳಿ ಮೆಜೆಸ್ಟಿಕ್ ಕಡೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ಮುಂದೆ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಸುರೇಶ್ ಬಾಬುಗೆ ಡಿಕ್ಕಿ ಹೊಡೆದು ಫುಟ್‌ಪಾತ್ ಮೇಲೆ ಹತ್ತಿದೆ. ಗಂಭೀರವಾಗಿ ಗಾಯಗೊಂಡ ಸುರೇಶ್ ಬಾಬು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಇದನ್ನೂ ಓದಿ: ಬೈಕ್​ ಮತ್ತು ಕಾರಿಗೆ ಗುದ್ದಿದ ಟ್ರಕ್​: ಐವರ ಸಾವು, ಐವರಿಗೆ ಗಾಯ!

ಘಟನೆ ಸಂಬಂಧ ಮಲ್ಲೇಶ್ವರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details