ಕರ್ನಾಟಕ

karnataka

ETV Bharat / city

ಬೆಂಗಳೂರಲ್ಲಿ ಕುಖ್ಯಾತ ಬೈಕ್ ಕಳ್ಳನ ಬಂಧನ: 10 ದ್ವಿಚಕ್ರ ವಾಹನ ವಶ - ದ್ವಿಚಕ್ರ ವಾಹನ ವಶ

ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೀಪಕ್‌ ಕುಮಾರ್‌ ಬಂಧಿತ ಆರೋಪಿ.

Bangalore
ಕುಖ್ಯಾತ ಬೈಕ್ ಕಳ್ಳನ ಬಂಧನ: 10 ದ್ವಿಚಕ್ರ ವಾಹನ ವಶ

By

Published : Oct 21, 2021, 5:02 PM IST

ಬೆಂಗಳೂರು: ಮನೆಗಳ ಮುಂದೆ ಹಾಗು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ವಶಪಡಿಸಿಕೊಂಡಿರುವ ದ್ವಿಚಕ್ರ ವಾಹನಗಳು

ದೀಪಕ್‌ ಕುಮಾರ್‌ ಬಂಧಿತ ಆರೋಪಿ. ಈತನ ಬಂಧನದಿಂದ ಅನ್ನಪೂರ್ಣೇಶ್ವರಿ ನಗರ, ಹನುಮಂತನಗರ, ಶಿವಾಜಿನಗರ, ಬ್ಯಾಡರಹಳ್ಳಿ, ಮಹಾಲಕ ಲೇಔಟ್, ಬಾಗಲಗುಂಟೆ ಹಾಗೂ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿನ ಬೈಕ್‌ಗಳ ಕಳವು ಪ್ರಕರಣಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅ.13ರಂದು ರಾತ್ರಿ 1 ಗಂಟೆ ಸಮಯದಲ್ಲಿ ಮನೆಯೊಂದರ ಮುಂದೆ ನಿಲ್ಲಿಸಿದ್ದ ಹೋಂಡಾ ಆ್ಯಕ್ಟಿವಾ ಸ್ಕೂಟರ್ ಮಾರನೆ ದಿನ ಬೆಳಗ್ಗೆ 6 ಗಂಟೆಗೆ ನೋಡುವಷ್ಟರಲ್ಲಿ ಕಳ್ಳತನವಾಗಿತ್ತು. ಈ ಬಗ್ಗೆ ಸ್ಕೂಟರ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇನ್ಸ್​​ಪೆಕ್ಟರ್ ಲೋಹಿತ್ ಮತ್ತು ಸಿಬ್ಬಂದಿ ಶೋಧ ಕೈಗೊಂಡು ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದಾಗ ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ.

ಸದ್ಯ ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ಉಳ್ಳಾಲ: ಬಂಧಿಸಲು ಹೋದ ಪೊಲೀಸರಿಗೇ ತಲ್ವಾರ್​ ತೋರಿಸಿ ರೌಡಿ ಶೀಟರ್ ಎಸ್ಕೇಪ್

ABOUT THE AUTHOR

...view details