ಹ್ಯಾಂಡಲ್ ಲಾಕ್ ಮುರಿದು ಬೈಕ್ ಕದಿಯುತ್ತಿದ್ದ ಖದೀಮರು ಅರೆಸ್ಟ್ - ಬೆಂಗಳೂರು ಅಪರಾಧ ಸುದ್ದಿ
ಬೈಕ್ ಕದಿಯುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 8 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೈಕ್‍ಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ: ದ್ವಿಚಕ್ರ ವಾಹನ, ಬ್ಯಾಟರೀಸ್, ಮೊಬೈಲ್ಸ್ ಸೀಜ್.....
ಬೆಂಗಳೂರು:ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ವಾಜಿದ್ (24), ಸಂತೋಷ್ (21), ಸಾದಿಕ್ ಪಾಷಾ (25) ಮತ್ತು ಸುದೀಪ್ (21) ಬಂಧಿತ ಆರೋಪಿಗಳು ಎಂದು ಪಶ್ಚಿಮ ವಿಭಾಗದ ಡಿ.ಸಿ.ಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ಆರು ಲಕ್ಷ ರೂ. ಮೌಲ್ಯದ ಎಂಟು ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು, 15 ಬ್ಯಾಟರಿಗಳು ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 12ರಂದು ಮನೆ ಮುಂದೆ ನಿಲ್ಲಿಸಿರುವ ಪಲ್ಸರ್ ಬೈಕ್ ಕಳುವಾಗಿರುವ ಬಗ್ಗೆ ಮಾಲೀಕರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಪೊಲೀಸರು ಸೆಪ್ಟೆಂಬರ್ 26 ರಂದು ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ
ಈ ವೇಳೆ ಮಾಗಡಿ ರಸ್ತೆ, ವಿಜಯನಗರ, ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಡಿ.ಸಿ.ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.