ಬೆಂಗಳೂರು:ಬಿಟ್ ಕಾಯಿನ್ (Bitcoin scam) ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Health Minister Dr.K.Sudhakar) ನಡೆಯನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಂಡಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಹೇಳಿಕೆ ನೀಡಿರುವ ಅವರು, ಹೆಚ್ಎಂ ಅಂದರೆ ಹೋಮ್ ಮಿನಿಸ್ಟರ್ ಅನ್ನಬೇಕೋ, ಹೆಲ್ತ್ ಮಿನಿಸ್ಟರ್ ಅನ್ನಬೇಕೋ? ಗೃಹ ಸಚಿವಾಲಯಕ್ಕೆ ಸಂಬಂಧಿಸಿದ ಬಿಟ್ ಕಾಯಿನ್ ಹಗರಣದ (Bitcoin scam) ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ?. ನಾಳೆ ಗೃಹ ಸಚಿವರು ಬಂದು ರಾಜ್ಯದ ಕೊರೊನಾ ಲಸಿಕೆಯ ಮಾಹಿತಿ ನೀಡ್ತಾರಾ? ಎಂದು ಕೇಳಿದ್ದಾರೆ.
ನಿನ್ನೆ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್, ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ವಿಚಾರವಾಗಿ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ (Randeep Surjewala) ಸೇರಿದಂತೆ ಹಲವರು ಮಾಡುತ್ತಿರುವ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದರು.
ಆರೋಪಿ ಶ್ರೀಕಿ ಒಬ್ಬ ಡ್ರಗ್ ಅಡಿಕ್ಟ್ ಆಗಿದ್ದು, ವಿದೇಶದಲ್ಲಿ ವ್ಯಾಸಂಗ ಮಾಡಿಕೊಂಡಿದ್ದ. ಈತನ ಮಾತಿಗೆ ಬೆಲೆ ಕೊಡುವ ಅಗತ್ಯವಿದೆಯೇ?. ರಾಜ್ಯ ಸರ್ಕಾರ ಸ್ಪಷ್ಟವಾಗಿದ್ದು ಯಾವುದೇ ರೀತಿಯಲ್ಲೂ ಯಾರನ್ನೂ ರಕ್ಷಣೆ ಮಾಡುವ ಕಾರ್ಯ ಮಾಡುತ್ತಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai)ಅತ್ಯಂತ ಗುಣಮಟ್ಟದ ಸರ್ಕಾರ ನಡೆಸುತ್ತಿದ್ದು, ಇದನ್ನು ಗೌರವಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದ್ದರು.
ಇದನ್ನೂ ಓದಿ:Bitcoin Case: ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಇಲಿಯನ್ನು ಬೆಟ್ಟ ಮಾಡಬೇಡಿ: ಕಾಂಗ್ರೆಸ್ ವಿರುದ್ಧ ಸುಧಾಕರ್ ಕಿಡಿ