ಬೆಂಗಳೂರು:ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿಜೆಪಿ ಹಾಗೂ ಅನರ್ಹ ಶಾಸಕರು ಹೆಸರು ಕೇಳಿಬರುತ್ತಿವ ವಿಚಾರಕ್ಕೆ ಮಹತ್ವ ಕೊಡುವ ಅವಶ್ಯಕತೆಯಿಲ್ಲ. ಇಂತಹ ಊಹಾಪೋಹದ ಹೇಳಿಕೆಗೆ ಕಿಮ್ಮತ್ತಿಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ಇಲ್ಲಸಲ್ಲದ ಅಪಾದನೆ ಮಾಡುತ್ತಿದ್ದಾರೆ. ಈಗಾಗಲೇ ಬ್ಲಾಕ್ಮೇಲ್ ಮಾಡುತ್ತಿದ್ದ ತಂಡವೊಂದನ್ನು ಪೊಲೀಸರು ಸೆರೆಹಿಡಿದಿದ್ದು, ಅವರೇ ಈ ಹನಿಟ್ರ್ಯಾಪ್ ತಂಡದಲ್ಲೂ ಇರಬಹುದು. ಸಿಸಿಬಿ ಮೂಲಗಳಲ್ಲಿ ಈ ಕುರಿತು ಪ್ರಶ್ನಿಸಿ ಅವರು ಸ್ಪಷ್ಟನೆ ನೀಡುತ್ತಾರೆ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.