ಕರ್ನಾಟಕ

karnataka

ETV Bharat / city

ರೋಷನ್​ ಬೇಗ್​, ಶಂಕರ್​ಗೆ ಟಿಕೆಟ್​ ಮಿಸ್... ಕೊನೆ ಗಳಿಗೆಯಲ್ಲಿ ಕೈಕೊಡುತ್ತಾ ಬಿಜೆಪಿ? ​​​​​​​ - Former Ministers R. Shankar and Roshan Beg

ಮಾಜಿ ಸಚಿವರಾದ ಆರ್​.ಶಂಕರ್ ಮತ್ತು ರೋಷನ್ ಬೇಗ್​ಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್​ ಮಿಸ್​ ಆಗಿದೆ. ಉಪ ಚುನಾವಣೆಯಲ್ಲಿ ಈ ಇಬ್ಬರಿಗೂ ಬಿಜೆಪಿ ಟಿಕೆಟ್ ನೀಡುವುದು ಅನುಮಾನ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ರೋಷನ್ ಬೇಗ್​ ಮತ್ತು ಆರ್​.ಶಂಕರ್

By

Published : Nov 14, 2019, 4:46 PM IST

Updated : Nov 14, 2019, 4:53 PM IST


ಬೆಂಗಳೂರು: ಮಾಜಿ ಸಚಿವರಾದ ಆರ್​.ಶಂಕರ್ ಮತ್ತು ರೋಷನ್ ಬೇಗ್​ಗೆ ಮೊದಲ ಪಟ್ಟಿಯಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಮಾಡದೇ ಇರುವುದು ಸಾಕಷ್ಟು ಅನುಮಾನಗಳನ್ನು ಹುಟ್ಟಿಸಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಈ ಇಬ್ಬರು ಅನರ್ಹ ಶಾಸಕರಿಗೆ ಟಿಕೆಟ್ ನೀಡದೇ ಬಿಜೆಪಿ ಕೈ ಕೊಡಲಿದೆಯಾ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಾಗೂ ಬಿಜೆಪಿ ಸೇರುವ 17 ಜನರಿಗೂ ಪಕ್ಷ ಟಿಕೆಟ್ ನೀಡಲಿದೆ ಎಂದು ಹೇಳಲಾಗಿತ್ತು. ಈಗ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡದೇ ಇರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ರಾಣೆಬೆನ್ನೂರು ಪ್ರತಿನಿಧಿಸುತ್ತಿದ್ದ ಅನರ್ಹ ಪಕ್ಷೇತರ ಶಾಸಕ ಆರ್​.ಶಂಕರ್​ಗೆ ಟಿಕೆಟ್ ನೀಡಲು ಸ್ಥಳೀಯವಾಗಿ ವಿರೋಧ ವ್ಯಕ್ತವಾಗಿದೆ. ಅವರಿಗೆ ಟಿಕೆಟ್ ನೀಡಿದರೆ ಉಪ ಚುನಾವಣೆಯಲ್ಲಿ ಗೆಲುವು ಕಷ್ಟ. ಅವರ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡಬೇಕೆನ್ನುವ ಅಭಿಪ್ರಾಯ ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬಂದಿದೆ.

ಇನ್ನು, ರಾಜ್ಯ ಬಿಜೆಪಿ ಕಾರ್ಯದರ್ಶಿ ಭಾರತಿ ಜಂಬಗಿ ಅವರು, ಶಂಕರ್ ಬದಲು ತಮಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈ ನಡುವೆ ಹಿರಿಯ ಸಚಿವರಾದ ಕೆ.ಎಸ್​.ಈಶ್ವರಪ್ಪ ಅವರು ತಮ್ಮ ಪುತ್ರ ಕಾಂತರಾಜ್​ಗೆ ರಾಣೆಬೆನ್ನೂರು ಕ್ಷೇತ್ರದಲ್ಲಿ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರಂತೆ.

ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ರೋಷನ್​ಬೇಗ್ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡುವ ಬಗ್ಗೆಯೂ ಬಿಜೆಪಿಯಲ್ಲಿ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ. ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಈ ಕ್ಷೇತ್ರದಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಐಎಂಎ ಹಗರಣದ ಹಿನ್ನೆಲೆಯಲ್ಲಿ ರೋಷನ್ ಬೇಗ್​ಗೆ ಟಿಕೆಟ್ ನೀಡಿದ್ರೆ, ತೊಂದರೆಯಾಗಬಹುದೆನ್ನುವ ನಿಟ್ಟಿನಲ್ಲಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

Last Updated : Nov 14, 2019, 4:53 PM IST

ABOUT THE AUTHOR

...view details