ಬೆಂಗಳೂರು: ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ಗೆ ಕಳುಹಿಸಿಕೊಡುವ ನಿರ್ಧಾರದ ಜೊತೆಗೆ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯನ್ನು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಬಿಜೆಪಿ ಕೋರ್ ಕಮಿಟಿ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕುರಿತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಮುಖ್ಯವಾಗಿ ಅಲ್ಲಿಯ ಘಟನೆ ಒಟ್ಟು ಪೂರ್ವನಿಯೋಜಿತ ಷಡ್ಯಂತ್ರ ಎನ್ನುವುದನ್ನು ವಿವರಗಳ ಸಹಿತ ಸಭೆಯಲ್ಲಿ ಚರ್ಚೆ ನಡೆಯಿತು.
ಈ ಕುರಿತು ಹೈಕೋರ್ಟ್ ಕೂಡಾ ತನಿಖೆಗೆ ಆದೇಶ ಮಾಡಿದೆ. ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾದಳ ತನಿಖೆ ನಡೆಸುತ್ತಿದೆ. ಎಸಿಬಿ ಕೂಡ ತನಿಖೆ ಮುಂದುವರೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇನ್ನಷ್ಟು ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ವಹಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದರು.
- ಉಸ್ತುವಾರಿ ನೇಮಕ
ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗು ಪರಿಷತ್ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು ಎಲ್ಲಾ ಆರು ಕ್ಷೇತ್ರಗಳಿಗೆ ಉಸ್ತಯವಾರಿಗಳನ್ನು ಕೋರ್ ಕಮಿಟಿ ಸಭೆಯಲ್ಲಿ ನೇಮಕ ಮಾಡಲಾಯಿತು ಎಂದು ಅರವಿಂದ ಲಿಂಬಾವಳಿ ತಿಳಿಸಿದರು.
ಶಿರಾ ವಿಧಾನಸಭಾ ಕ್ಷೇತ್ರ- ಡಿಸಿಎಂ ಗೋವಿಂದ ಕಾರಜೋಳ,ಡಿಸಿಎಂ ಅಶ್ವತ್ಥನಾರಾಯಣ, ಎನ್. ರವಿಕುಮಾರ್, ಬಿ.ವೈ ವಿಜಯೇಂದ್ರ, ಸಂಸದ ಪಿ.ಸಿ ಮೋಹನ್, ನಾರಾಯಣಸ್ವಾಮಿ, ಪೂರ್ಣಿಮಾ ಶ್ರೀನಿವಾಸ್ ಮತ್ತು ತಿಪ್ಪೇಸ್ವಾಮಿ
ರಾಜರಾಜೇಶ್ವರಿ ಕ್ಷೇತ್ರ- ಅರವಿಂದ ಲಿಂಬಾವಳಿ, ಆರ್ ಅಶೋಕ್, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ್, ಎಸ್.ಆರ್ ವಿಶ್ವನಾಥ್
ಬೆಂಗಳೂರು ಶಿಕ್ಷಕರ ಕ್ಷೇತ್ರ-ಸುರೇಶ್ ಕುಮಾರ್, ಸಿದ್ದೇಶ್