ಬೆಂಗಳೂರು: ಉಪ ಚುನಾವಣಾ ಪ್ರಚಾರದಲ್ಲಿ ಅಸಂಸದೀಯ ಪದ ಬಳಕೆ ಮಾಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಕೆ ಮಾಡಿದೆ.
ಕಾಂಗ್ರೆಸ್,ಜೆಡಿಎಸ್ನಿಂದ ಅಸಂಸದೀಯ ಪದ ಬಳಕೆ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು! - ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್
ಉಪ ಚುನಾವಣಾ ಪ್ರಚಾರದಲ್ಲಿ ಅಸಂಸದೀಯ ಪದ ಬಳಕೆ ಮಾಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಕೆ ಮಾಡಿದೆ.
ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಕೆ ಮಾಡಿತು.
ಶಾಸಕರು ಅನರ್ಹ ಆಗಿಲ್ಲ, ರಮೇಶ್ ಕುಮಾರ್ ತೀರ್ಪು ಅನರ್ಹ ಆಗಿದೆ. ಅಭ್ಯರ್ಥಿಗಳನ್ನು ಚಪ್ಪಲಿಗೆ ಹೋಲಿಸಿ ರಾಜಕೀಯ ಅಧಃಪತನಕ್ಕೆ ಇಳಿದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಸಚಿವ ಸೋಮಣ್ಣ ಬಚ್ಚಾ ಎನ್ನುವ ಮೂಲಕ ಅಸಂಸದೀಯ ಪದ, ಕೆಳಮಟ್ಟದ ಭಾಷೆ ಬಳಕೆ ಮಾಡಿದ್ದಾರೆ. ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದರು.