ಕರ್ನಾಟಕ

karnataka

ETV Bharat / city

ಬಿಜೆಪಿ ಕೋರ್ ಕಮಿಟಿ ಸಭೆಗೆ ಕೊರೊನಾ ಭೀತಿ: ಮಾಧ್ಯಮ, ಸಂಸದರು, ಶಾಸಕರಿಗೆ ನೋ ಎಂಟ್ರಿ! - ಬಿಜೆಪಿ ಕೋರ್ ಕಮಿಟಿ ಸಭೆಗೆ ಕೊರೊನಾ ಭೀತಿ

ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಕಚೇರಿ ಪ್ರವೇಶಕ್ಕೆ ಮಾಧ್ಯಮ, ಸಂಸದರು, ಶಾಸಕರು ಹಾಗೂ ಕಾರ್ಯಕರ್ತರಿಗೆ ನಿರ್ಬಂಧ ಹೇರಲಾಗಿದೆ.

BJP core committee meeting
ರಾಜ್ಯ ಬಿಜೆಪಿ ಕಚೇರಿ

By

Published : Jun 6, 2020, 1:34 PM IST

ಬೆಂಗಳೂರು:ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಗೆ ಕೊರೊನಾ ಬಿಸಿ ತಟ್ಟಿದ್ದು, ರಾಜ್ಯ ಬಿಜೆಪಿ ಕಚೇರಿ ಪ್ರವೇಶಕ್ಕೆ ಮಾಧ್ಯಮ, ಸಂಸದರು, ಶಾಸಕರು ಹಾಗೂ ಕಾರ್ಯಕರ್ತರಿಗೆ ನಿರ್ಬಂಧ ಹೇರಲಾಗಿದೆ.

ರಾಜ್ಯ ಬಿಜೆಪಿ ಕಚೇರಿ

ರಾಜ್ಯಾದ್ಯಂತ ಕೊರೊನಾ ವೈರಸ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುತ್ತಿರುವ ಬಿಜೆಪಿ ಕೋರ್ ಕಮಿಟಿ ಸಭೆ ನಂತರ ಮಾಧ್ಯಮದವರಿಗೆ ಮಾಹಿತಿ ನೀಡುವುದಕ್ಕೆ ಅವಕಾಶವಿರುವುದಿಲ್ಲ. ಅಲ್ಲದೇ ಬಿಜೆಪಿ ಸಂಸದರು, ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರಿಗೆ ಬಿಜೆಪಿ ಕಚೇರಿಗೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದು ಕೋರ್ ಕಮಿಟಿ‌ ಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಗಳು, ಅವರ ಬೆಂಬಲಿಗರು ಪಕ್ಷದ ಕಚೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಹಿನ್ನೆಲೆ ಸಾಮಾಜಿಕ‌ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಸೂಚನೆ ನೀಡಲಾಗಿದೆ.

ABOUT THE AUTHOR

...view details