ಕರ್ನಾಟಕ

karnataka

ETV Bharat / city

ಬಿಜೆಪಿ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ: ಕುಮಾರಸ್ವಾಮಿ ಕಿಡಿ - karnataka political news

ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೆ ವಿಕಲಚೇತನರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ದಿವ್ಯಾಂಗ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

H D Kumaraswamy
ಕುಮಾರಸ್ವಾಮಿ

By

Published : Jul 27, 2020, 3:37 PM IST

ಬೆಂಗಳೂರು: ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ವಿಕಲಚೇತನ ಫಲಾನುಭವಿಗಳನ್ನು ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೆ ವಿಕಲಚೇತನರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಎಲ್ಲ ಫಲಾನುಭವಿಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಪಿಂಚಣಿ ಕೈಗೆ ಸಿಗದೆ ಅಗತ್ಯ ಔಷಧಗಳನ್ನು ಕೊಳ್ಳಲೂ ಈ ಫಲಾನುಭವಿಗಳು ಪರದಾಡುತ್ತಿದ್ದಾರೆ. ಹಲವು ಮಂದಿಗೆ ಊಟಕ್ಕೂ ತತ್ವಾರವಾಗಿದೆ. ವರ್ಷಾಚರಣೆಯ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರ ಮೊದಲು ಹಣ ಬಿಡುಗಡೆ ಮಾಡಲಿ ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

ಸವಾಲುಗಳ ವರ್ಷ...

ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ABOUT THE AUTHOR

...view details