ಬೆಂಗಳೂರು: ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ. ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ಬಿ.ಕೆ. ಹರಿಪ್ರಸಾದ್, ಗೃಹ ಸಚಿವರ ವಿರುದ್ಧ ಹಗುರವಾಗಿ ಹಾಗೂ ನಿಂದನಾತ್ಮಕವಾಗಿ ಮಾತನಾಡಿ ಮಾನಹಾನಿ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ಗೃಹ ಸಚಿವರ ವಿರುದ್ಧ ನಿಂದನಾತ್ಮಕ ಹೇಳಿಕೆ ಆರೋಪ.. ಬಿ.ಕೆ.ಹರಿಪ್ರಸಾದ್ ವಿರುದ್ಧ ದೂರು - hariprasad statement against home minister
ಫ್ರೀಡಂ ಪಾರ್ಕ್ನಲ್ಲಿ ಬಿ.ಕೆ. ಹರಿಪ್ರಸಾದ್ ಅವರು ಗೃಹ ಸಚಿವರ ವಿರುದ್ಧ ಹಗುರವಾಗಿ ಹಾಗೂ ನಿಂದನಾತ್ಮಕವಾಗಿ ಮಾತನಾಡಿ ಮಾನಹಾನಿ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ.
ಬಿ ಕೆ ಹರಿಪ್ರಸಾದ್ ವಿರುದ್ಧ ಎನ್ ಆರ್ ರಮೇಶ್ ದೂರು
ಇದನ್ನೂ ಓದಿ:ಈಶ್ವರಪ್ಪ ವಿರುದ್ಧದ ಆರೋಪ ಬಗ್ಗೆ ಮಾಹಿತಿ ಪಡೆಯುತ್ತೇನೆ: ತರಾತುರಿಯಲ್ಲಿ ತೆರಳಿದ ರಾಜ್ಯ ಬಿಜೆಪಿ ಉಸ್ತುವಾರಿ
ಹೀಗಾಗಿ ಹರಿಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ. 'ಗೃಹ ಸಚಿವರಿಗೆ ಹೆಂಡ ಕುಡಿಯುವ ಅಭ್ಯಾಸ ಇದೆಯೋ..ಇಲ್ಲವೋ...ಗಾಂಜಾ ಸೇದುವ ಅಭ್ಯಾಸವಿದೆಯಾ, ಆರಗ ಜ್ಞಾನೇಂದ್ರ ಅಜ್ಞಾನ ಜ್ಞಾನೇಂದ್ರ' ಎಂದು ಹರಿಪ್ರಸಾದ್ ನಿಂದಿಸಿದ್ದರು ಎನ್ನುವ ಆರೋಪವಿದೆ.