ಬೆಂಗಳೂರು/ನವದೆಹಲಿ:ಕೇಂದ್ರ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಮುಖ್ಯಮಂತ್ರಿ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಸಾಥ್ ನೀಡಿದ್ದು, ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣ ಎಂದಿದ್ದಾರೆ.
ಯಡಿಯೂರಪ್ಪ ಪರ ನಿಂತ ಕೇಂದ್ರ ನಾಯಕ ಸುಬ್ರಹ್ಮಣ್ಯಂ ಸ್ವಾಮಿ - karnataka bjp
ಬಿ.ಎಸ್. ಯಡಿಯೂರಪ್ಪ ಇಲ್ಲದೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಕೇವಲ ಬಿಎಸ್ವೈ ಯಿಂದ ಮಾತ್ರ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಕೇಂದ್ರ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೆಲವರು ಪಕ್ಷದಲ್ಲಿ ಬಿಎಸ್ವೈ "ಚಮಚ" ಆಗಲಿಲ್ಲ ಎಂಬ ಕಾರಣಕ್ಕೆ ಅಧಿಕಾರದಿಂದ ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಇಲ್ಲದೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಕೇವಲ ಬಿಎಸ್ವೈ ಅವರಿಂದ ಮಾತ್ರ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.
ಇದಲ್ಲದೆ 2013ರಲ್ಲಿ ಯಡಿಯೂರಪ್ಪ ಇಲ್ಲದೇ ಬಿಜೆಪಿ ರಾಜ್ಯದಲ್ಲಿ ಬಹುಮತ ಗಳಿಸಲು ಸಾಧ್ಯವಾಗದೇ ಇರುವುದನ್ನು ಸೂಚಿಸಿ ಮತ್ತೆ ಅದೇ ತಪ್ಪನ್ನು ಪಕ್ಷ ಏಕೆ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋದ ಸಂದರ್ಭದಲ್ಲೂ ಸುಬ್ರಮಣ್ಯಂ ಸ್ವಾಮಿ ಯಡಿಯೂರಪ್ಪಗೆ ಬೆಂಬಲ ಸೂಚಿಸಿ ಅವರ ಪರ ನಿಂತಿದ್ದರು.