ಬೆಂಗಳೂರು: ಮಧ್ಯಪ್ರದೇಶದ ರಾಜ್ಯಪಾಲ ಲಾಲಾಜಿ ಟಂಡನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
ಮಧ್ಯಪ್ರದೇಶದ ರಾಜ್ಯಪಾಲರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ವರ್ಗ ಹಾಗು ಬೆಂಬಲಿಗರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಓಂ ಶಾಂತಿ ಎಂದು ಸಿಎಂ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಹಿರಿಯ ನಾಯಕ, ಬಿಹಾರ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ಮತ್ತು ಹಾಲಿ ಮಧ್ಯಪ್ರದೇಶದ ರಾಜ್ಯಪಾಲ ಲಾಲಾಜಿ ಟಂಡನ್ ನಿಧನದ ಸುದ್ದಿ ತಿಳಿದು ಬೇಸರವಾಯಿತು, ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವರಾದ ಶ್ರೀರಾಮುಲು, ಡಾ.ಸುಧಾಕರ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಸಿಎಂ ಸಂಪುಟ ಸಹೋದ್ಯೋಗಿಗಳು ಲಾಲಾಜಿ ಟಂಡನ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.