ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಇಂದು ಘೋಷಣೆ ಮಾಡಿಲಾಗಿತ್ತು. ಆದ್ರೆ, ಪ್ರಶಸ್ತಿ ಘೋಷಿಸಿದ ದಿನವೇ ಹಾಲ್ದೊಡ್ಡೇರಿ ನಿಧನರಾಗಿದ್ದು ದುರಾದೃಷ್ಟಕರ ಸಂಗತಿ ಎಂದು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದು, ಹಾಲ್ದೊಡ್ಡೇರಿ ನಿಧನಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ, ವಿಜ್ಞಾನ ಸಾಹಿತ್ಯಕ್ಕೆ ಅವರ ಕೊಡುಗೆ ಅನನ್ಯವಾದದ್ದು, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಅವರು ಜನಪ್ರಿಯರಾಗಿದ್ದರು. ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಇಂದು ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಹಾಲ್ದೊಡ್ಡೇರಿ ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ. ಅಭಿನಂದನೆ ತಿಳಿಸಬೇಕಾದ ಸಂದರ್ಭದಲ್ಲಿ ಸಂತಾಪ ಸೂಚಿಸುತ್ತಿರುವುದು ಸಂಕಟ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಬೇಸರದ ನುಡಿಗಳನ್ನಾಡಿದ್ದಾರೆ.