ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸೇರಿದಂತೆ ಎಲ್ಲಾ 43 ಜನಪ್ರತಿನಿಧಿಗಳಿಗೆ ರಾಜ್ಯ ಬಿಜೆಪಿ ನಾಯಕರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದ ಸಹೋದ್ಯೋಗಿಗಳು ಅಭಿನಂದಿಸಿದ್ದಾರೆ.
ರಾಜ್ಯದ ಸಂಸದರಾದ ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಮತ್ತು ಭಗವಂತ್ ಖೂಬಾ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಿದ ಹಾಗೂ ಕೇಂದ್ರದಲ್ಲಿ ರಾಜ್ಯಕ್ಕೆ ಹೆಚ್ಚಿನ ಸ್ಥಾನಮಾನ ಸಿಗಬೇಕೆಂಬ ಕನ್ನಡಿಗರ ಒತ್ತಾಸೆಯನ್ನು ಈಡೇರಿಸಿರುವುದಕ್ಕೆ ಪ್ರಧಾನಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ:ರಾಜ್ಯಸಭೆ TO ಮೋದಿ ಸಂಪುಟ: ಉದ್ಯಮಿ ರಾಜೀವ್ ಚಂದ್ರಶೇಖರ್ ಕನಸೀಗ ನನಸು
2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನಾಯಕತ್ವ ಮೆಚ್ಚಿ ರಾಜ್ಯದಿಂದ 25 ಲೋಕಸಭಾ ಸದಸ್ಯರನ್ನು ರಾಜ್ಯದ ಜನತೆ ಆಯ್ಕೆ ಮಾಡಿದ್ದರು. ಇದೀಗ ಏಕಕಾಲಕ್ಕೆ ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನ ನೀಡಿ, ರಾಜ್ಯಕ್ಕೆ ಸಿಗಬೇಕಾದ ನ್ಯಾಯವನ್ನು ಒದಗಿಸಿದ್ದಾರೆ. ರಾಜ್ಯದ ನೂತನ ಸಚಿವರುಗಳು ನಿಮ್ಮ ನಿರೀಕ್ಷೆಯಂತೆ ಕೆಲಸ ಮಾಡಿ, ಕೇಂದ್ರ ಮತ್ತು ರಾಜ್ಯಕ್ಕೆ ನ್ಯಾಯ ಒದಗಿಸುತ್ತಾರೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ್, ಲಕ್ಷ್ಮಣ ಸವದಿ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕರಂದ್ಲಾಜೆ, ಖೂಬಾ, ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ