ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಿದ್ಧತಾ ಕಾರ್ಯ ಆರಂಭಿಸಿರುವ ಬಿಜೆಪಿಯು ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಕಾರ್ಯ, ಸಂಘಟನೆ ಸೇರಿದಂತೆ ಚುನಾವಣಾ ಕಾರ್ಯತಂತ್ರದ ಕುರಿತು ಬೆಂಗಳೂರು ಕೇಂದ್ರ ಜಿಲ್ಲಾ ವಲಯದ ಪದಾಧಿಕಾರಿಗಳ ಸಭೆ ನಡೆಸುತ್ತಿದೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮೂರು ದಿನಗಳ ಸರಣಿ ಸಭೆಯ ಎರಡನೇ ದಿನದ ಸಭೆ ಆರಂಭಗೊಂಡಿದೆ. ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಮಹತ್ವದ ಸಭೆ ನಡೆಸುತ್ತಿದ್ದು, ಇಂದು ಬೆಂಗಳೂರು ಕೇಂದ್ರ ಜಿಲ್ಲೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಗುತ್ತಿದೆ.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಬಿಜೆಪಿ ಕೇಂದ್ರ ವಿಭಾಗದ ಅಧ್ಯಕ್ಷ ಮಂಜುನಾಥ್, ಬೆಂಗಳೂರು ಕೇಂದ್ರ ವಿಭಾಗದ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಬಿಬಿಎಂಪಿ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ, ಹಾಲಿ ಇರುವವರಿಗೆ ಮತ್ತೆ ಟಿಕೆಟ್ ನೀಡಬೇಕಾ? ಬೇರೆಯವರಿಗೆ ಟಿಕೆಟ್ ನೀಡಬೇಕಾ? ಕೆಲ ವಾರ್ಡ್‌ಗಳಲ್ಲಿ ಪರಾಜಿತ ಅಭ್ಯರ್ಥಿಗಳಿದ್ದು, ಅಲ್ಲಿ ಗೆಲ್ಲಲ್ಲು ಏನು ಮಾಡಬೇಕು? ಕೆಲ ಶಾಸಕರು ಬಿಜೆಪಿಗೆ ಬಂದಿದ್ದು, ಅವರ ಬೆಂಬಲಿಗರೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ.