ಕರ್ನಾಟಕ

karnataka

ETV Bharat / city

ಪುತ್ರನಿಗೆ ಕಾಂಗ್ರೆಸ್ ಟಿಕೆಟ್: ಎ.ಮಂಜು ಅವರಿಗೆ ಗೇಟ್‌ಪಾಸ್‌ ನೀಡಿದ ಬಿಜೆಪಿ - ಎ ಮಂಜುಗೆ ಬಿಜೆಪಿ ನೋಟಿಸ್​

ಎ.ಮಂಜು ಅವರ ಪುತ್ರ ಮಂಥರ್​ ಗೌಡಗೆ ಕಾಂಗ್ರೆಸ್​ ಟಿಕೆಟ್​ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಮಂಡ್ಯ ಜಿಲ್ಲೆಯ ಪ್ರಭಾರಿ ಹಾಗೂ ಉಳಿದ ಎಲ್ಲಾ ಜವಾಬ್ದಾರಿಗಳಿಂದ ಅವರನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪಕ್ಷ ವಿರೋಧಿ ಚಟುವಟಿಕೆಯ ಕಾರಣ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

bjp notice to a manju
ಎ ಮಂಜು

By

Published : Nov 23, 2021, 7:28 PM IST

ಬೆಂಗಳೂರು: ಬಿಜೆಪಿ ನಾಯಕ ಎ‌.ಮಂಜು ಪುತ್ರ ಮಂಥರ್ ಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು ಪಕ್ಷದ ಮಂಡ್ಯ ಜಿಲ್ಲೆಯ ಪ್ರಭಾರಿ, ಸೇರಿದಂತೆ ಎಲ್ಲಾ ಜವಾಬ್ದಾರಿಗಳಿಂದ ಮಂಜು ಅವರನ್ನು ಬಿಡುಗಡೆಗೊಳಿಸಿ ಬಿಜೆಪಿ ಆದೇಶಿಸಿದೆ.


ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಕೆಲವು ಸಂಶಯಗಳು ಉಂಟಾಗಿವೆ. ಈ ಕಾರಣದಿಂದ ಪಕ್ಷದ ಮಂಡ್ಯ ಜಿಲ್ಲೆಯ ಪ್ರಭಾರಿ, ಮತ್ತುಳಿದ ಎಲ್ಲಾ ಜವಾಬ್ದಾರಿಗಳಿಂದ ನಿಮ್ಮನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.

ಇತ್ತೀಚೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಮಾಡಿರುವ ಎ.ಮಂಜು, ಕಾಂಗ್ರೆಸ್ ಪಕ್ಷ ಸೇರುವ ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಕಠಿಣ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗಿದೆ.

ABOUT THE AUTHOR

...view details