ಬೆಂಗಳೂರು:ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದಹಿರಿಯ ಮುತ್ಸದ್ಧಿ, ಅನುಭವಿ ರಾಜಕಾರಣಿ, ಹೋರಾಟಗಾರ ಎ.ಕೆ.ಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಅತ್ಯಂತ ನಿಷ್ಠುರ ರಾಜಕಾರಣಿ ಎ.ಕೆ.ಸುಬ್ಬಯ್ಯ ಅವರು, ಅನ್ಯಾಯದ ವಿರುದ್ಧ ಸದಾ ಹೋರಾಡಿದವರು ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ.