ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾರ್ಚ್ 30 ಮತ್ತು 31ರಂದು ನಡೆಯಬೇಕಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ ತಿಳಿಸಿದ್ದಾರೆ.
ಇದೇ ತಿಂಗಳ 30-31ಕ್ಕೆ ಕಾರ್ಯಕಾರಿಣಿ ಸಭೆ ನಿಗದಿ ಆಗಿತ್ತು. ಆದರೆ, ಸಂಸತ್ತಿನಲ್ಲಿ ಸಂಸದರಿಗೆ ಕಡ್ಡಾಯ ಹಾಜರಾತಿಗೆ ವಿಪ್ ಜಾರಿ ಮಾಡಿದ್ದಾರೆ. ಹಾಗಾಗಿ ಕೇಂದ್ರ ಸಚಿವರು ಮತ್ತು ರಾಜ್ಯಾಧ್ಯಕ್ಷರು ಕಲಾಪದಲ್ಲಿ ಇರಬೇಕಿರುವ ಕಾರಣದಿಂದ ಕಾರ್ಯಕಾರಿಣಿ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.