ಬೆಂಗಳೂರು: ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು? ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? ಮಜವಾದಿ ಸಿದ್ದರಾಮಯ್ಯ ಅವರೇ ಗಾಂಧಿ ಮಗ ಕುಡುಕನಾದ, ಎಸ್.ಆರ್.ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲಾಗದು ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ಸಿದ್ದರಾಮಯ್ಯನವರೇ, ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ ಎಂದು ಅಗಲಿರುವ ಸಿದ್ದು ಪುತ್ರನ ಹೆಸರು ಪ್ರಸ್ತಾಪಿಸಿ ಬಿಜೆಪಿ ಟೀಕಿಸಿದೆ.