ಕರ್ನಾಟಕ

karnataka

ETV Bharat / city

ಬಿಎಸ್​ವೈ ಇಲ್ಲದಿದ್ದರೆ ಬಿಜೆಪಿ ಸರ್ವನಾಶ ಖಂಡಿತ: ದಿಂಗಾಲೇಶ್ವರ ಶ್ರೀ ಎಚ್ಚರಿಕೆ

ಲಿಂಗಾಯತರನ್ನು ಯಾವುದೇ ಪಕ್ಷ ಸರಿಯಾಗಿ ನಡೆಸಿಕೊಂಡಿಲ್ಲ. ಯಡಿಯೂರಪ್ಪ ಇದ್ದರೆ ಮಾತ್ರ ಬಿಜೆಪಿ, ಇಲ್ಲದಿದ್ದರೆ ಸರ್ವನಾಶವಾಗುತ್ತದೆ ಎಂದು ಬಾಲೆ ಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದರು.

bjp-will-washout-in-the-state-without-bs-yadiyurappa
ದಿಂಗಾಲೇಶ್ವರ ಶ್ರೀ

By

Published : Jul 20, 2021, 4:49 PM IST

ಬೆಂಗಳೂರು: ಬಿ. ಎಸ್​. ಯಡಿಯೂರಪ್ಪ ಇದ್ದರೆ ಮಾತ್ರ ಬಿಜೆಪಿ. ಇಲ್ಲದಿದ್ದರೆ ರಾಜ್ಯದಲ್ಲಿ ಪಕ್ಷದ ಸರ್ವನಾಶ ಖಂಡಿತ. ಲಿಂಗಾಯತ ಸಮಾಜ ಪಕ್ಷದಿಂದ ದೂರವಾಗುತ್ತದೆ ಎಂದು ಬಾಲೆ ಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.

ಬಿಎಸ್​ವೈ ಇಲ್ಲದಿದ್ದರೆ ಬಿಜೆಪಿ ಸರ್ವನಾಶ ಖಂಡಿತ

ಸಿಎಂ ಬಿಎಸ್​​ವೈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಕೇವಲ ಲಿಂಗಾಯತ ಸ್ವಾಮೀಜಿಗಳಷ್ಟೆ ಇಲ್ಲಿಗೆ ಬಂದಿಲ್ಲ. ಎಲ್ಲಾ ಸಮುದಾಯದ ಸ್ವಾಮೀಜಿಗಳು ಬಂದಿದ್ದಾರೆ. ಯಡಿಯೂರಪ್ಪ ತಮ್ಮ ಕೈಯಲ್ಲಿ ಏನು ಇಲ್ಲ, ವರಿಷ್ಠರ ಮಾತು ಕೇಳಬೇಕು ಎಂದಿದ್ದಾರೆ. ಲಿಂಗಾಯತರನ್ನು ಯಾವುದೇ ಪಕ್ಷ ಸರಿಯಾಗಿ ನಡೆಸಿಕೊಂಡಿಲ್ಲ. ಯಡಿಯೂರಪ್ಪ ಇದ್ದರೆ ಮಾತ್ರ ಬಿಜೆಪಿ, ಇಲ್ಲದಿದ್ದರೆ ಸರ್ವನಾಶವಾಗುತ್ತದೆ. ಪಕ್ಷದಿಂದ ಲಿಂಗಾಯತ ಸಮಾಜ ದೂರವಾಗುತ್ತದೆ. ಹಾಗಾಗಿ ನಾವು ವರಿಷ್ಠರಿಗೆ ಮನವಿ ಮಾಡುತ್ತೇವೆ ಯಡಿಯೂರಪ್ಪ ಅವರನ್ನು ಮುಂದುವರೆಸಿ ಎಂದರು.

ಬೇರೆ ‌ಪಕ್ಷದ ಶಾಸಕರನ್ನು ಕರೆತಂದು ಸರ್ಕಾರ ಮಾಡಿದ್ದಾರೆ. ನೆರೆ ಮತ್ತು ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದಾರೆ. ಹಾಗಾಗಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕು. ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಎಚ್ಚೆತ್ತುಕೊಳ್ಳಬೇಕು. ರಾಜ್ಯದಲ್ಲಿ ಈ ಹಿಂದೆ ಜರುಗಿದ ಘಟನೆ ಮತ್ತೆ ಮರುಕಳಿಸಬಾರದು ಅದಕ್ಕಾಗಿ ಎಚ್ಚೆತ್ತುಕೊಳ್ಳಿ ಎಂದು ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದರು.

ABOUT THE AUTHOR

...view details