ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಕಮಿಷನ್ ದಂಧೆ ಹೆಚ್ಚಾಗುತ್ತಿದೆ. ಈಗಾಗಲೇ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ಮೋದಿಗೆ ಮತ್ತು ಸಿಎಂಗೆ ದೂರು ನೀಡಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದಿದೆ. ಈಗಾಗಲೇ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ಮತ್ತು ಸಿಎಂಗೆ ದೂರು ನೀಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ಕೇಳುತ್ತಿದೆ ಎಂದು ದೂರು ನೀಡಲಾಗಿದೆ.