ಬೆಂಗಳೂರು:ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ, ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನ ಮತ್ತು ಉಪ ಚುನಾವಣೆ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.
ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಬಿ.ಎಲ್.ಸಂತೋಷ್: ರಾಜಕೀಯ, ಉಪ ಚುನಾವಣೆ ಕುರಿತು ಚರ್ಚೆ? - BL Santosh meets BS Yeddyurappa in Bangalore news
ವಿಜಯದಶಮಿ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬೆಂಗಳೂರಿಗೆ ಆಗಮಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು.
ಬಿಎಸ್ವೈ ಭೇಟಿಯಾದ ಬಿ.ಎಲ್ ಸಂತೋಷ್
ಬಿಎಸ್ವೈ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಸಂತೋಷ್ ಅವರು ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಚರ್ಚಿಸಿದ್ದು, ವಿಜಯದಶಮಿ ಹಿನ್ನೆಲೆಯಲ್ಲಿ ಪರಸ್ಪರ ಬನ್ನಿ ಹಂಚಿಕೊಂಡು, ಕೆಲಕಾಲ ರಾಜಕೀಯ ವಿಚಾರಗಳ ಕುರಿತೂ ಮಾತುಕತೆ ನಡೆಸಿದರು.
ಇದನ್ನೂಓದಿ:ಬಿಎಸ್ವೈ ಭೇಟಿಯಾಗಿ ಹಬ್ಬಕ್ಕೆ ಶುಭಕೋರಿದ ಸಿಎಂ ಬೊಮ್ಮಾಯಿ, ಬೆಂಗಳೂರು ಉಸ್ತುವಾರಿ ಚರ್ಚೆ?