ಬೆಂಗಳೂರು:ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಇಂದು ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿ ನೀಡಿದರು. ಸಚಿವ ಸಂಪುಟ ವಿಸ್ತರಣೆ ಸಂಬಂಧ 15 ನಿಮಿಷಗಳ ಕಾಲ ಚರ್ಚೆ ನಡೆಸಿದರು. ವಲಸಿಗ ಮತ್ತು ಮೂಲ ಬಿಜೆಪಿ ಶಾಸಕರಲ್ಲಿ ಎಷ್ಟು ಜನರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು? ಸೋತವರಿಗೂ ಅವಕಾಶ ನೀಡುವ ಕುರಿತು ಸಮಾಲೋಚನೆ ನಡೆಸಿದರು ಎಂದು ತಿಳಿದು ಬಂದಿದೆ.
ಸಿಎಂ ಬಿಎಸ್ವೈ ನಿವಾಸಕ್ಕೆ ಬಿ.ಎಲ್.ಸಂತೋಷ್ ಭೇಟಿ: ಸಂಪುಟ ವಿಸ್ತರಣೆ ಕುರಿತು ಚರ್ಚೆ? - ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಇಂದು ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸಿಎಂ ನಿವಾಸಕ್ಕೆ ಬಿ.ಎಲ್ ಸಂತೋಷ್ ಭೇಟಿ: ಸಂಪುಟ ವಿಸ್ತರಣೆ ಕುರಿತು ಚರ್ಚೆ!
ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂತೋಷ್ ಭೇಟಿ ಕುತೂಹಲ ಮೂಡಿಸಿದೆ. ದಾವೋಸ್ನಿಂದ ವಾಪಸ್ ಬಂದ ಸಿಎಂ ಕುಶಲೋಪರಿ ವಿಚಾರಿಸುವ ನೆಪದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.