ಕರ್ನಾಟಕ

karnataka

ETV Bharat / city

ಮತ್ತೊಂದು ಬಿಎಂಟಿಸಿ ಬಸ್​​ನಲ್ಲಿ ಬೆಂಕಿ: 30 ಪ್ರಯಾಣಿಕರು ಅಪಾಯದಿಂದ ಪಾರು - ಬಿಎಂಟಿಸಿ ಬಸ್​​ನಲ್ಲಿ ಬೆಂಕಿ

ಚಾಮರಾಜಪೇಟೆ ಬಳಿಕ ಇದೀಗ ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ‌ ಮತ್ತೆ ಬಿಎಂಟಿಸಿ ಬಸ್ ಹೊತ್ತಿ ಉರಿದಿರುವ ಘಟನೆ ನಡೆದಿದೆ.

bmtc
ಬಿಎಂಟಿಸಿ ಬಸ್​​ನಲ್ಲಿ ಬೆಂಕಿ

By

Published : Feb 1, 2022, 2:29 PM IST

ಬೆಂಗಳೂರು: ರಾಜಧಾನಿಯಲ್ಲಿ ಹಾಡಹಾಗಲೇ ಮತ್ತೆ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಕೆಲ‌ದಿನಗಳ ಹಿಂದೆ ಚಾಮರಾಜಪೇಟೆಯ ಮಕ್ಕಳ ಕೂಟ ಬಸ್ ನಿಲ್ದಾಣ ಬಳಿ ಬಿಎಂಟಿಸಿಸ್ ಬಸ್​​ನಲ್ಲಿ ಅಗ್ನಿ ಕಾಣಿಸಿಕೊಂಡಿತ್ತು. ಇದೀಗ ಅದೇ ರೀತಿ ಮತ್ತೊಂದು ಬಸ್​​ಗೆ ಬೆಂಕಿ ಹೊತ್ತಿ ಕೊಂಡಿದೆ.

ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ‌ ಸುಮಾರು 30 ಪ್ರಯಾಣಿಕರಿದ್ದ ಬಸ್ ಹೋಗುವಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ‌ಯ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಚಾಲಕ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಕೆಲ ಕ್ಷಣಗಳ ಬಳಿಕ ಬಸ್ ಸಂಪೂರ್ಣ ಹಾನಿಯಾಗಿದೆ.

ಮತ್ತೊಂದು ಬಿಎಂಟಿಸಿ ಬಸ್​​ನಲ್ಲಿ ಬೆಂಕಿ

ಇದನ್ನೂ ಓದಿ: ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಪ್ರಾಣಾಪಾಯದಿಂದ ಪಾರಾದ 40 ಪ್ರಯಾಣಿಕರು

ಕೂಡಲೇ ಅಗ್ನಿಶಾಮಕದಳಕ್ಕೆ‌ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಂತ್ರಿಕ ಕಾರಣಗಳಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಬಿಎಂಟಿಸಿಯ ತಾಂತ್ರಿಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details