ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ನಾಳೆ ಹಾಗೂ ನಾಡಿದ್ದು ಬಿಎಂಟಿಸಿ ಬಸ್ಗಳ ಓಡಾಟ ಇದ್ದರೂ ಸಹ ಸಾರ್ವಜನಿಕರಿಗೆ ಸಂಚಾರಿಸಲು ಅವಕಾಶ ಇರುವುದಿಲ್ಲ.
ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ, ಅನುಮತಿಸಲಾದ ಚಟುವಟಿಕೆಗಳಿಗೆ ಅಗತ್ಯ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ನಿಷೇಧಿವಲ್ಲದ ಕೈಗಾರಿಕೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯ ಅನುಕೂಲಕ್ಕಾಗಿ 450 -500 ಅಗತ್ಯ ಸಾಮಾನ್ಯ ಸಾರಿಗೆ ಸೇವೆಗಳ ಸೌಲಭ್ಯ ಒದಗಿಸಲಾಗುತ್ತದೆ.