ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾರೂ ಆತಂಕಪಡಬೇಕಿಲ್ಲ ಎಂದು ಅಭಯ ನೀಡಿದ್ದಾರೆ.
ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಪತ್ತೆ ಪ್ರಕರಣ: ಆತಂಕ ಬೇಡವೆಂದ ಸಿಎಂ - ವಿಶ್ವ ಆರ್ಥಿಕ ಸಮ್ಮೇಳನ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸ್ವಿಡ್ಜರ್ಲ್ಯಾಂಡ್ನ ದಾವೋಸ್ನಲ್ಲಿ ಜರುಗುತ್ತಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಂಡಿರುವ ಅವರು, ಅಲ್ಲಿಂದಲೇ ಟ್ವೀಟ್ ಮೂಲಕ ರಾಜ್ಯದ ಜನರು ಆತಂಕ ಪಡಬೇಡಿ ಎಂದಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ. ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.