ಕರ್ನಾಟಕ

karnataka

ETV Bharat / city

ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ: ಆರ್.ಅಶೋಕ್​ - Brahmins have got a caste certificate

ಬ್ರಾಹ್ಮಣರಿಗೆ ಈ ಹಿಂದೆ ಇಲ್ಲದಿದ್ದ ಜಾತಿ ಪ್ರಮಾಣಪತ್ರವನ್ನು ನೀಡಲು ಸ್ವಯಂ ಪ್ರೇರಣೆಯಿಂದ ಆದೇಶ ಹೊರಡಿಸಿದ್ದೇನೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್​ ಅವರಿಗೆ ತಿಳಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

R Ashok
ಆರ್ ಅಶೋಕ್​

By

Published : Jul 5, 2021, 9:55 PM IST

ಬೆಂಗಳೂರು: ಬ್ರಾಹ್ಮಣ ಸಮುದಾಯದಲ್ಲಿ ಎಲ್ಲರೂ ಶ್ರೀಮಂತರಾಗಿಲ್ಲ, ಅನೇಕ ಬಡವರಿದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್​ ತಿಳಿಸಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್​ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ 1,000 ಜನರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಕಂದಾಯ ಸಚಿವರು, ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡು ನನಗೆ ಮತ ಹಾಕಿದ್ದಾರೆ. ಇದು ನನ್ನ ಜವಾಬ್ದಾರಿಯಾಗಿದೆ, ನಾನು ಜನಸೇವೆಯನ್ನು ಮುಂದುವರಿಸುತ್ತೇನೆ.

ಬ್ರಾಹ್ಮಣರಿಗೆ ಈ ಹಿಂದೆ ಇಲ್ಲದಿದ್ದ ಜಾತಿ ಪ್ರಮಾಣಪತ್ರವನ್ನು ನೀಡಲು ಸ್ವಯಂಪ್ರೇರಣೆಯಿಂದ ಆದೇಶ ಹೊರಡಿಸಿದ್ದೇನೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್​ ಅವರಿಗೆ ತಿಳಿಸಲಾಗಿದೆ. ಬಡ ಬ್ರಾಹ್ಮಣ ಬಾಲಕಿಯರ ಉಚಿತ ಶಿಕ್ಷಣಕ್ಕಾಗಿ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ಕಟ್ಟಡವನ್ನು ನಿರ್ಮಿಸಿದ್ದೇವೆ. ಜೊತೆಗೆ ಭೂಮಿ ಮತ್ತು ಆರ್ಥಿಕ ನೆರವು ಸಹ ನೀಡಿದ್ದೇವೆ ಎಂದು ಹೇಳಿದರು.

ಕೋವಿಡ್‌ನಿಂದ ತಮ್ಮ ಕುಟುಂಬದವರನ್ನು ಕಳೆದುಕೊಂಡವರು ಮೃತ ದೇಹಗಳನ್ನು ಪಡೆಯಲು ವಿಫಲರಾಗಿದ್ದಾರೆ. ಕೆಲವರು ಹೆದರಿ ಮೃತದೇಹವನ್ನು ಪಡೆಯಲು ಮುಂದೆ ಬರಲಿಲ್ಲ. ಆದ್ದರಿಂದ ನಾವೇ ಅಸ್ತಿ ವಿಸರ್ಜನೆ ಮಾಡಲು ನಿರ್ಧರಿಸಿದೆವು. ನಾನು ಮೂರು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡ ಧಾರ್ಮಿಕ ಕಾರ್ಯವನ್ನು ಮುಗಿಸಿದೆ. ಇನ್ನೂ ಒಂದು ಧಾರ್ಮಿಕ ಆಚರಣೆ ಮಾಡುವುದು ಬಾಕಿ ಇದೆ. ಅದಕ್ಕಾಗಿ ನಾನು ಕೇರಳದ ವಿಷ್ಣುಪಾಡಾಗೆ ಅಥವಾ ವಾರಣಾಸಿಗೆ ಭೇಟಿ ನೀಡಬೇಕಿದೆ. ನನ್ನ ಜನ ನನಗೆ ಸೇವೆ ಸಲ್ಲಿಸಲು ಅವಕಾಶ ಮಾಡಿ ಕೊಟ್ಟಿದ್ದಾರೆ. ಶೀಘ್ರದಲ್ಲೇ ಈ ಕಾರ್ಯವನ್ನು ಸಹ ಮಾಡಿ ಮುಗಿಸುತ್ತೇನೆ ಎಂದು ಹೇಳಿದರು.

ABOUT THE AUTHOR

...view details