ಬೆಂಗಳೂರು: ನಗರದ ಕಾಟನ್ ಪೇಟೆಯ ಲಾಡ್ಜ್ ನಲ್ಲಿ ಶುಕ್ರವಾರ ತಡರಾತ್ರಿ ಇಬ್ಬರು ತೃತೀಯಲಿಂಗಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಮಂಗಳಮುಖಿಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಲಾಡ್ಜ್‌ನಲ್ಲಿ ಇಬ್ಬರು ತೃತೀಯ ಲಿಂಗಿಗಳ ಮೇಲೆ ಮಾರಣಾಂತಿಕ ಹಲ್ಲೆ.. ಒಬ್ಬರ ಸ್ಥಿತಿ ಚಿಂತಾಜನಕ! - ಬೆಂಗಳೂರಿನ ಲಾಡ್ಜ್‌ನಲ್ಲಿ ತೃತೀಯಲಿಂಗಿಗಳ ಮೇಲೆ ಮಾರಣಾಂತಿಕ ಹಲ್ಲೆ
ಲಾಡ್ಜ್‌ನಲ್ಲಿ ಇಬ್ಬರು ತೃತೀಯ ಲಿಂಗಿಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಾರಣಾಂತಿಕ ಹಲ್ಲೆ
ಓದಿ:ಶಾಕಿಂಗ್..! ಮದುವೆಯಾದ ಮೇಲೆ 'ಅವಳಲ್ಲ' ಅನ್ನೋದು ಯುವಕನಿಗೆ ಗೊತ್ತಾಯ್ತು!!
ತೃತೀಯ ಲಿಂಗಿಗಳಾದ ಅರ್ಚನಾ ಮತ್ತು ಸಂಜನಾ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು, ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಘಟನೆ ಸಂಬಂಧ ಒಬ್ಬನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಯನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.