ಬೆಂಗಳೂರು:ಇಂದು ಕನ್ನಡ ಚಿತ್ರರಂಗದ ಆರಾಧ್ಯದೈವ, ಕನ್ನಡಿಗರ ಕಣ್ಮಿಣಿ, ನಟಸಾರ್ವಭೌಮ ಡಾ.ರಾಜ್ಕುಮಾರ್ ಅವರ 92ನೇ ವರ್ಷದ ಹುಟ್ಟುಹಬ್ಬ. ಡಾ.ರಾಜ್ ಬರ್ತ್ಡೇಗೆ ಮಾಜಿ ಪ್ರಧಾನಿ ಹೆಚ್ಡಿಡಿ ಹಾಗೂ ಸಿಎಂ ಶುಭಾಶಯ ಕೋರಿದ್ದಾರೆ.
ಡಾ.ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಬಿಎಸ್ವೈ, ಹೆಚ್ಡಿಡಿ - ಪ್ರಧಾನಿ ಹೆಚ್.ಡಿ. ದೇವೇಗೌಡ
ಮಾಜಿ ಪ್ರಧಾನಿ ಹೆಚ್ಡಿಡಿ ಹಾಗೂ ಸಿಎಂ ಯಡಿಯೂರಪ್ಪ ಡಾ.ರಾಜ್ಕುಮಾರ್ ಅವರ 92ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಭಾರತೀಯ ಚಿತ್ರರಂಗ ಕಂಡ ಮೇರು ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ ಡಾ.ರಾಜ್ ಕುಮಾರ್ ಜನ್ಮದಿನದಂದು ಅವರಿಗೆ ಅಭಿಮಾನ ಪೂರ್ವಕ ನಮನಗಳು. ನಾಡು ಎಂದೂ ಮರೆಯದ ಸಾಂಸ್ಕೃತಿಕ ಶಕ್ತಿಯಾಗಿ ಬೆಳೆದು, ತಮ್ಮ ಕಲಾ ಪ್ರೌಢಿಮೆಯ ಜೊತೆಗೆ ಹೃದಯವಂತಿಕೆಯಿಂದ ಜನಮನ ಗೆದ್ದ ಡಾ.ರಾಜ್ ಅವರು ನಾಡು ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಟ್ವೀಟ್ ಮಾಡಿ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ, ಗಾನ ಗಂಧರ್ವ ಡಾ.ರಾಜ್ ಕುಮಾರ್ ಅವರ ಜನ್ಮದಿನೋತ್ಸವದ ಶುಭಾಶಯಗಳು. ಅವರು ಇಂದು ನಮ್ಮೊಂದಿಗಿಲ್ಲದಿದ್ದರೂ, ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿದ್ದಾರೆ ಎಂದಿದ್ದಾರೆ.