ಬೆಂಗಳೂರು:ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಮಯದಲ್ಲಿಯೂ ಅವರು ಚೆನ್ನಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಸಂಪುಟದ ಎಲ್ಲಾ ಸಚಿವರು ಅವರಿಗೆ ಸಾಥ್ ನೀಡಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಸಂಬಂಧ ಯಾವುದೇ ಚರ್ಚೆ ಹೈಕಮಾಂಡ್ನಲ್ಲಿ ನಡೆದಿಲ್ಲ. ಸಿಎಂ ಆಗಿ ಅವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು.