ಬೆಂಗಳೂರು :ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬದ ಸದಸ್ಯರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಸಾಂತ್ವನ ಹೇಳಿದರು.
ಘಟನೆ ಕುರಿತು ಸಿಎಂ ಬಸಬವರಾಜ್ ಬೊಮ್ಮಾಯಿ, ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಮಾತುಕತೆ ನಡೆಸಿದ್ದ ಯಡಿಯೂರಪ್ಪ, ಇಂದು ದೂರವಾಣಿ ಕರೆ ಮಾಡಿ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಸದ್ಯದಲ್ಲೇ ನಿಮ್ಮ ಮನೆಗೆ ಭೇಟಿ ನೀಡುತ್ತೇನೆ ಧೈರ್ಯದಿಂದ ಇರಿ. ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು. ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.
(ಇದನ್ನೂ ಓದಿ: 'ಕೊಲೆ ಮಾಡಿದ್ದು ಮುಸ್ಲಿಂ ಗೂಂಡಾಗಳೆಂದು ಹೇಳಿದ್ದೆ, ಈಗಲಾದ್ರೂ ಹರಿಪ್ರಸಾದ್ ಒಪ್ಕೋತಾರಾ?')