ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಲಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನಾಳೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆ ಆಗಸ್ಟ್ 2 ಅಥವ 3 ರಂದು ಜಿಲ್ಲಾಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಕೇಂದ್ರದಿಂದ ಆರು ಸಾವಿರ, ರಾಜ್ಯದಿಂದ ನಾಲ್ಕು ಸಾವಿರ ರೂ. ಒಟ್ಟು ಹತ್ತು ಸಾವಿರ ರೂ. ರೈತರಿಗೆ ನೀಡಲಾಗುವುದು. ಎರಡು ಸಾವಿರ ರೂ.ಗಳಂತೆ ಎರಡು ಕಂತುಗಳಲ್ಲಿ ನಾಲ್ಕು ಸಾವಿರ ರೂ. ಪಾವತಿಸಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳು ಹದಿನೈದು ದಿನಕ್ಕೊಮ್ಮೆಯಾದರೂ ಸಮಸ್ಯೆ ಇರುವ ಕಡೆ ಭೇಟಿ ಕೊಟ್ಟು, ಸಮಸ್ಯೆಯನ್ನು ಬಗೆಹರಿಸಬೇಕೆಂದು ಸೂಚನೆ ಕೊಟ್ಟಿದ್ದೇನೆ ಎಂದರು.