ದೇವನಹಳ್ಳಿ: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಕೇಂದ್ರದ ವರಿಷ್ಠರೊಂದಿಗೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲು ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಮುಗುಳು ನಗುವಿನೊಂದಿಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಮುಗುಳು ನಗೆಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಮರಳಿದ ಬಿಎಸ್ವೈ: ಹೇಳಿದ್ದೇನು? - ಸಿಎಂ ಯಡಿಯೂರಪ್ಪ ನ್ಯೂಸ್
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ವರಿಷ್ಠರೊಂದಿಗೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲು ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಮುಗುಳು ನಗುವಿನೊಂದಿಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ 11 ಗಂಟೆಗೆ ದೆಹಲಿಯಿಂದ ಬಂದಿಳಿದರು ಸಿಎಂ ಮಾಧ್ಯಮದೊಂದಿಗೆ ಮಾತನಾಡಿ, ಒಂದೆರಡು ದಿನಗಳಲ್ಲಿ ಸಚಿವರ ಪ್ರಮಾಣ ವಚನ ಸ್ವೀಕಾರ ಮಾಡಲು ವ್ಯವಸ್ಥೆ ಮಾಡುವೆ. ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು. ನಾನು ಅಂದುಕೊಂಡಂತೆ ಯಾರಿಗೂ ತೊಂದರೆಯಾಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ತೀರ್ಮಾನ ಮಾಡ್ತೇವೆ ಎಂದರು.
ಅಮಿತ್ ಶಾ ಮತ್ತು ಜೆ.ಪಿ ನಡ್ಡಾ ನಾನು ಹೇಳಿರುವುದಕ್ಕೆ ಒಪ್ಪಿಕೊಂಡಿದ್ದಾರೆ. ದೆಹಲಿಗೆ ಹೋದ ಕೆಲಸ ಆಗಿದೆ, ಹೀಗಾಗಿ ಖುಷಿಯಾಗಿದ್ದೇನೆ. ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆಗಳು ಆಗಲಿವೆ ಎಂದು ಅವರು ಸುಳಿವು ನೀಡಿದರು.