ಬೆಂಗಳೂರು : ಕ್ರೈಸ್ತ ಸಮುದಾಯಕ್ಕೆ ಕ್ರಿಸ್ ಮಸ್ ಹಬ್ಬದ ಶುಭಾಶಯ ಕೋರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಹಬ್ಬದ ಸಂಭ್ರಮದಲ್ಲಿ ಕೋವಿಡ್ ಮಾರ್ಗಸೂಚಿ ಮರೆಯದಂತೆ ಮನವಿ ಮಾಡಿದ್ದಾರೆ.
"ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಕಾಮನೆಗಳು. ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಎಲ್ಲರೂ ಕೋವಿಡ್-ಸೂಕ್ತ ನಡವಳಿಕೆಗಳನ್ನು ಪಾಲಿಸುತ್ತಾ ಹಬ್ಬವನ್ನಾಚರಿಸೋಣ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ನಾಡಿನ ಎಲ್ಲ ಕ್ರೈಸ್ತ ಬಂಧುಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ಸಮಾಜದ ಎಲ್ಲ ಸಂಕಷ್ಟಗಳನ್ನು ಕಳೆದು, ಎಲ್ಲರಿಗೂ ಉತ್ತಮ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸುಗಳನ್ನು ದೇವರು ನೀಡಲಿ, ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸೋಣ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.