ಕರ್ನಾಟಕ

karnataka

ETV Bharat / city

ಬಿಎಸ್​​ವೈ ವಿರುದ್ಧ ಡಿನೋಟಿಫಿಕೇಷನ್ ಆರೋಪ: ದೂರು ಹಿಂಪಡೆಯಲು ಮುಂದಾದ ದೂರುದಾರ - ಬಿಎಸ್​ವೈ ವಿರುದ್ಧದ ದೂರು ಹಿಂಪಡೆಯಲು ಮುಂದಾದ ದೂರುದಾರ

ಪ್ರಕರಣ ಸಂಬಂಧ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಅವರು 2017ರಲ್ಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಬಿಎಸ್​​ವೈ ವಿರುದ್ಧ ಡಿನೋಟಿಫಿಕೇಷನ್ ಆರೋಪ
ಬಿಎಸ್​​ವೈ ವಿರುದ್ಧ ಡಿನೋಟಿಫಿಕೇಷನ್ ಆರೋಪ

By

Published : Dec 9, 2020, 10:26 PM IST

ಬೆಂಗಳೂರು:ನಗರದ ಮಠದಹಳ್ಳಿ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಂಡಿದ್ದ 1 ಎಕರೆ 11 ಗುಂಟೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಲ್ಲಿಸಿರುವ ದೂರನ್ನು ಹಿಂಪಡೆಯುವುದಾಗಿ ದೂರುದಾರ ಜಯಕುಮಾರ್ ಹಿರೇಮಠ್ ಹೈಕೋರ್ಟ್​ಗೆ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಅವರು 2017ರಲ್ಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ದೂರುದಾರ ಜಯಕುಮಾರ್ ಹಿರೇಮಠ ಪರ ವಕೀಲರು ಪೀಠಕ್ಕೆ ಮೆಮೋ ಸಲ್ಲಿಸಿ ದೂರು ಹಿಂಪಡೆಯುವುದಾಗಿ ತಿಳಿಸಿದರು.

(ಇದನ್ನೂ ಓದಿ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ!)

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ದೂರು ಹಿಂಪಡೆಯುವ ಕುರಿತು ದೂರುದಾರರು ವಿವರಣೆ ನೀಡಬೇಕು. ಬಳಿಕ ಈ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 1977ರಲ್ಲಿ ಮಠದ ಹಳ್ಳಿ ಬಡಾವಣೆಗೆ ಭೂಮಿ ವಶಪಡಿಸಿಕೊಂಡಿತ್ತು. ಈ ಭೂಮಿಯಲ್ಲಿ ಸರ್ವೆ ನಂಬರ್ 7ರ‌ಲ್ಲಿದ್ದ ತಿಮ್ಮಾರೆಡ್ಡಿ, ನಾಗಪ್ಪ ಮತ್ತು ಮುನಿಸ್ವಾಮಪ್ಪಗೆ ಸೇರಿದ್ದ 1 ಎಕರೆ 11 ಗುಂಟೆ ಭೂಮಿಯನ್ನು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅಕ್ರಮವಾಗಿ ಡಿನೋಟಿಫೈ ಮಾಡಿಸಿದ್ದಾರೆ ಎಂದು ಆರೋಪಿಸಿ ಜಯಕುಮಾರ್ ಹಿರೇಮಠ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಆ ಬಳಿಕ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಿಎಸ್​ವೈ 2017ರಲ್ಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ: ನಾಳೆ ನಾವು ಕಲಾಪ ಬಹಿಷ್ಕರಿಸುತ್ತೇವೆ ಎಂದ ಸಿದ್ದರಾಮಯ್ಯ

ABOUT THE AUTHOR

...view details