ಬೆಂಗಳೂರು:ಹೈಕಮಾಂಡ್ಗೆ 1800 ಕೋಟಿ ಕಪ್ಪ ಕೊಟ್ಟ ಕಾಂಗ್ರೆಸ್ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಳ್ಳಿಹಾಕಿದ್ದಾರೆ.
0ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತ್ತು ಅವರ ನಾಯಕರು ವೈಚಾರಿಕವಾಗಿ ದಿವಾಳಿ ಆಗಿದ್ದಾರೆ. ಸಾರ್ವಜನಿಕವಾಗಿ ಚರ್ಚಿಸೋಕೆ ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಮೋದಿ ಅವರ ಜನಪ್ರಿಯತೆ ಹೆಚ್ಚಾಗಿದ್ದರಿಂದ ಕಾಂಗ್ರೆಸ್ನವರು ಹತಾಶರಾಗಿದ್ದಾರೆ. ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಅಂತಾ ಗೊತ್ತಾಗಿದೆ. ಈ ಹಿಂದೆ ಈ ವಿಚಾರಚಾಗಿ ವಿಚಾರಣೆ ನಡೆದು ಅವೆಲ್ಲ ನಕಲಿ ಅಂತಾ ಗೊತ್ತಾಗಿದೆ. ಆದರೂ ನಕಲಿ ಸುದ್ದಿಗಳನ್ನು ಹರಡುವ ಉದ್ದೇಶ ಹೊಂದಿದ್ದಾರೆ. ಇದು ಅಪ್ರಸ್ತುತ ಮತ್ತು ಸುಳ್ಳಿನ ಕಂತೆ. ಈ ವಿಚಾರವಾಗಿ ಕಾನೂನು ತಜ್ಞರ ಜೊತೆ ಮಾತನಾಡಿ, ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗುತ್ತೇನೆ ಎಂದು ಎಚ್ಚರಿಕೆ ನೀಡಿದರು.