ಬೆಂಗಳೂರು: ಜುಲೈ 26ಕ್ಕೆ ಸರ್ಕಾರ ಎರಡು ವರ್ಷ ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆ ಕರೆಯಲಾಗುತ್ತದೆ. ನಾಯಕತ್ವ ಬದಲಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಬಿಎಸ್‌ವೈ ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಸಿಎಂ ಬಿಎಸ್‌ವೈ ಕಾವೇರಿ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ದೆಹಲಿಯಲ್ಲಿ ಪರ್ಯಾಯ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವ ಕುರಿತು ಕೊರತೆ ಇಲ್ಲ. ಸಾಕಷ್ಟು ನಾಯಕರು ಬಿಜೆಪಿಯಲ್ಲಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಸೂಚಿಸಿಲ್ಲ. ಜುಲೈ 26ಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದಿದ್ದಾರೆ.
ತಮ್ಮ ವಿರುದ್ಧ ಕೆಲವರು ಹೈಕಮಾಂಡ್ಗೆ ದೂರು ಸಲ್ಲಿಸಿದ್ದ ವಿಚಾರಕ್ಕೆ ಮಾತನಾಡಿದ ಸಿಎಂ ಕೆಲವು ವಿಚಾರಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಈಗಲೂ ಒನ್ ಅಂಡ್ ಒನ್ಲಿ ಯಡಿಯೂರಪ್ಪ.. ದಿಲ್ಲಿಯೊಳಗೆ 'ಬಾಹುಬಲಿ'ಯಂತಾದ ಬಿಎಸ್‌ವೈ.. ಆದರೂ ನಿಲ್ಲದ 'ಭಿನ್ನ'ರಾಗ!