ಕರ್ನಾಟಕ

karnataka

ETV Bharat / city

ನಾಯಕತ್ವ ಬದಲಾವಣೆ ಗೊಂದಲಕ್ಕೆ ತಲೆಕೆಡಿಸಿಕೊಳ್ಳದ ಸಿಎಂ: ನಾಳೆ ಜಿಲ್ಲಾಡಳಿತಗಳ ಜೊತೆ ವಿಡಿಯೋ ಸಂವಾದ - ನಾಯಕತ್ವ ಬದಲಾವಣೆ ಗೊಂದಲಕ್ಕೆ ಸಿಎಂ ಡೋಂಟ್ ಕೇರ್

ನಾಳೆ ಮಧ್ಯಾಹ್ನ 12 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಆಡಳಿತದೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.

BS Yediyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : Jun 18, 2021, 1:34 PM IST

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ವಿದ್ಯಮಾನಗಳ ಬಗ್ಗೆ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಳಿತ ನಿರ್ವಹಣೆಯಲ್ಲಿ ತಲ್ಲೀನರಾಗಿದ್ದಾರೆ. ಪಕ್ಷದ ಸಭೆಯಲ್ಲಿ ಭಾಗಿಯಾಗಿ ನಂತರ ಎಂದಿನಂತೆ ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಆಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಬಳ್ಳಾರಿ, ವಿಜಯನಗರ,ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ತಾವಿರುವ ಸ್ಥಳದಿಂದಲೇ ವೀಡಿಯೋ ಸಂವಾದದಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಕಳೆದ ಎರಡು ದಿನಗಳಿಂದ ಪಕ್ಷದಲ್ಲಿನ ಆಂತರಿಕ ವಿದ್ಯಮಾನಗಳ ಅವಲೋಕನ ನಡೆಯುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪರ-ವಿರೋಧಿ ಬಣದ ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಕೆಲವರು ಸಿಎಂ ಬದಲಾವಣೆ ಬೇಡಿಕೆ ಇರಿಸಿದ್ದು, ಟೆಲಿಫೋನ್ ಕದ್ದಾಲಿಕೆ ಆರೋಪ ಮಾಡಿದ್ದಾರೆ. ಇಷ್ಟೆಲ್ಲಾ ಆದರೂ ತಲೆ ಕೆಡಿಸಿಕೊಳ್ಳದ ಸಿಎಂ ಆಡಳಿತ ನಿರ್ವಹಣೆಯತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ:'ಎಲ್ಲ ಇಲಾಖೆಯಲ್ಲೂ ವಿಜಯೇಂದ್ರ ಹಸ್ತಕ್ಷೇಪವಿದೆ, ಯಾವ ಮಂತ್ರಿಯೂ ಸಮಾಧಾನವಾಗಿಲ್ಲ'

ABOUT THE AUTHOR

...view details