ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ (ಭಾನುವಾರ) ಬೆಂಗಳೂರು ನಗರ ಸಂಚಾರ ನಡೆಸಲಿದ್ದಾರೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಗರ ಸಂಚರಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ಮಾಡಲಿದ್ದಾರೆ.
ನಾಳೆ ಬಿಎಸ್ವೈ ರಾಜಧಾನಿ ಸಂಚಾರ... ವಿವಿಧ ಕಾಮಗಾರಿಗಳ ಪರಿಶೀಲನೆ - Karnataka political issue
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಬೆಂಗಳೂರು ನಗರ ಸಂಚಾರ ನಡೆಸಲಿದ್ದಾರೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಗರ ಸಂಚರಿಸಿ ಕಾಮಗಾರಿಗಳ ಪರಿಶೀಲನೆ ಮಾಡಲಿದ್ದಾರೆ.

B.S.Yadiyurappa city rounds tomorrow
ಹೆಬ್ಬಾಳ, ಟಿನ್ ಫ್ಯಾಕ್ಟರಿ, ಬೆಳ್ಳಂದೂರು, ಸಿಲ್ಕ್ ಬೋರ್ಡ್ ಹಾಗೂ ಅವುಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ. ಮುಖ್ಯಮಂತ್ರಿ ಅವರೊಂದಿಗೆ ಈ ಪ್ರದೇಶಗಳ ಸಂಸದರು, ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ತೆರಳಲಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ನಗರದಲ್ಲಿ ಕಾಮಗಾರಿಗಳ ಕಾರ್ಯ ಎಲ್ಲಿಯವರೆಗೂ ಬಂದಿದೆ. ಅಲ್ಲದೆ, ಕಾಮಗಾರಿಗಳಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಏನು ಎಂಬುದನ್ನು ತಿಳಿದುಕೊಳ್ಳಲಿದ್ದಾರೆ.