ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬುರೆವಿ ಚಂಡಮಾರುತ ಉಂಟಾಗಿದೆ. ಪ್ರತೀ ಗಂಟೆಗೆ 70 ರಿಂದ 90 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 3ರ ರಾತ್ರಿ ಅಥವಾ ಡಿಸೆಂಬರ್ 4ರ ಬೆಳಿಗ್ಗೆ ತಮಿಳುನಾಡು ಮತ್ತು ಕನ್ಯಾಕುಮಾರಿಗೆ ಸೈಕ್ಲೋನ್ ಎಫೆಕ್ಟ್ ತಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಇಂದಿನಿಂದ ಡಿ.5 ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.