ಬೆಂಗಳೂರು:ಕಡಿಮೆ ಬಡ್ಡಿ ದರದಲ್ಲಿ 100 ಕೋಟಿ ಲೋನ್ ಕೊಡುವುದಾಗಿ ನಂಬಿಸಿ ಉದ್ಯಮಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ವಂಚಕರನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಹರ್ಷಿಣಿ, ನಿವೇದಿತಾ ಹಾಗೂ ನಂದನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ತಮಿಳುನಾಡು ಮೂಲದ ಕತ್ರಿವೇಲು ಎಂಬಾತ ಕಳೆದ ಅಕ್ಟೋಬರ್ನಲ್ಲಿ ಹೆಚ್ಎಸ್ಆರ್ ಲೇಔಟ್ನಲ್ಲಿ ಫ್ಯೂಚರ್ ಕ್ರೈಸ್ ಫೈನಾನ್ಸ್ ಕಂಪನಿ ಆರಂಭಿಸಿದ್ದ. ಬಳಿಕ ಬೆಂಗಳೂರು ಮೂಲದ ಇಬ್ಬರು ಸೇರಿದಂತೆ ಒಟ್ಟು 11 ಮಂದಿಯನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದ.
ಇದನ್ನೂ ಓದಿ: ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ