ಬೆಂಗಳೂರು:ರಾಜ ರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಇಂದು ಮುಗಿದಿದ್ದು, ಒಟ್ಟು 4 ನಾಮಪತ್ರಗಳು ತಿರಸ್ಕೃತಗೊಂಡಿವೆ.
ಆರ್ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆ: ನಾಲ್ಕು ನಾಮಪತ್ರ ತಿರಸ್ಕೃತ - ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ 23 ಅಭ್ಯರ್ಥಿಗಳು 27 ನಾಮಪತ್ರಗಳನ್ನು ಸಲ್ಲಿಸಿದ್ದು, ಮೂರು ನಾಮಪತ್ರಗಳು ತಿರಸ್ಕೃತಗೊಂಡಿವೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಸಿದ್ದು, ಒಂದು ನಾಮಪತ್ರ ತಿರಸ್ಕೃತಗೊಂಡಿದೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ 23 ಅಭ್ಯರ್ಥಿಗಳು 27 ನಾಮಪತ್ರಗಳನ್ನು ಸಲ್ಲಿಸಿದ್ದು, ಸಲ್ಲಿಕೆ ಮೂರು ನಾಮಪತ್ರಗಳು ತಿರಸ್ಕೃತಗೊಂಡಿವೆ. ಎಚ್.ಎಂ. ಕಿಶೋರ್ ಗೌಡ, ಶಿವಲಿಂಗಯ್ಯ, ಸಂಪತ್ ಎಂಬುವರ ನಾಮಪತ್ರ ತಿರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಸಿದ್ದು, ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 19 ರಂದು ಕೊನೆ ದಿನವಾಗಿದ್ದು, ನವೆಂಬರ್ 3 ರಂದು ಮತದಾನ ನಡೆಯಲಿದೆ. ನ.10 ರಂದು ಮತ ಎಣಿಕೆ ನಡೆಯಲಿದ್ದು, ನ.12 ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.