ಕರ್ನಾಟಕ

karnataka

ETV Bharat / city

ಮಿನಿ ಸಮರ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಯಾವಾಗ? - ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ

ಮೂರು ಪಕ್ಷಗಳು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಲೆಕ್ಕಾಚಾರ ಹಾಕುತ್ತಿವೆ. ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಜರಾಜೇಶ್ವರಿನಗರದಿಂದ ಆರ್.ಮುನಿರತ್ನ, ರಾಯಚೂರು ಜಿಲ್ಲೆ ಮಸ್ಕಿಯಿಂದ ಪ್ರತಾಪ್ ಗೌಡ ಪಾಟೀಲ್ ಹಾಗೂ ತುಮಕೂರಿನ ಶಿರಾದಿಂದ ಗೆಲ್ಲುವ ಅಭ್ಯರ್ಥಿಯನ್ನು ಹಾಕಲು ಬಿಜೆಪಿ ಹುಡುಕಾಟ ನಡೆಸುತ್ತಿದೆ..

byelection of the three assembly constituencies
ಉಪಚುನಾವಣೆ

By

Published : Aug 31, 2020, 10:18 PM IST

ಬೆಂಗಳೂರು :ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಕ್ಟೋಬರ್​ನಲ್ಲಿ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಬಿಹಾರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಾಂಕವನ್ನು ಅಕ್ಟೋಬರ್​ನಲ್ಲಿ ಚುನಾವಣಾ ಆಯೋಗ ಪ್ರಕಟಿಸಲಿದೆ. ಅದೇ ಸಂದರ್ಭದಲ್ಲಿ ರಾಜ್ಯದ ರಾಜರಾಜೇಶ್ವರಿನಗರ, ಮಸ್ಕಿ ಹಾಗೂ ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆಯ ದಿನಾಂಕ ಘೋಷಣೆಯಾಗುವ ಸಂಭವ ಇದೆ.

ಅಕ್ಟೋಬರ್​ನಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಿದರೆ ಡಿಸೆಂಬರ್ ಅಂತ್ಯಕ್ಕೆ ಗ್ರಾಮ ಪಂಚಾಯತ್‌ ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯತ್​ಗಳಿಗೂ ಚುನಾವಣೆ ನಿಗದಿಯಾಗಲಿದೆ. ಹಾಗಾಗಿ, ಆಡಳಿತಾರೂಢ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮಿನಿ ಮಹಾಸಮರಕ್ಕೆ ತೆರೆಮರೆಯಲ್ಲೇ ಕಸರತ್ತು ಆರಂಭಿಸಿವೆ. ಇದರ ಫಲಿತಾಂಶ 2023ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಲೆಕ್ಕಾಚಾರ.

ಮೂರು ಪಕ್ಷಗಳು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಲೆಕ್ಕಾಚಾರ ಹಾಕುತ್ತಿವೆ. ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಜರಾಜೇಶ್ವರಿನಗರದಿಂದ ಆರ್.ಮುನಿರತ್ನ, ರಾಯಚೂರು ಜಿಲ್ಲೆ ಮಸ್ಕಿಯಿಂದ ಪ್ರತಾಪ್ ಗೌಡ ಪಾಟೀಲ್ ಹಾಗೂ ತುಮಕೂರಿನ ಶಿರಾದಿಂದ ಗೆಲ್ಲುವ ಅಭ್ಯರ್ಥಿಯನ್ನು ಹಾಕಲು ಬಿಜೆಪಿ ಹುಡುಕಾಟ ನಡೆಸುತ್ತಿದೆ.

ಮೂಲಗಳ ಪ್ರಕಾರ ಮಾಜಿ ಶಾಸಕ ಮಧುಗಿರಿಯ ಕೆ ಎನ್‌ ರಾಜಣ್ಣ ಇಲ್ಲವೇ ಮಾಜಿ ಸಂಸದ ಸಿ ಪಿ ಮೂಡಲಗಿರಿಯಪ್ಪ ಅವರ ಅಳಿಯನನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಆಕಾಂಕ್ಷಿಗಳ ದಂಡೇ ದೊಡ್ಡದಿದೆ. ಇನ್ನು, ಕಾಂಗ್ರೆಸ್‍ನಿಂದ ಮಾಜಿ ಸಚಿವ ಟಿ ಬಿ ಜಯಚಂದ್ರ ಹಾಗೂ ಜೆಡಿಎಸ್‍ನಿಂದ ದಿ.ಸತ್ಯನಾರಾಯಣ ಅವರ ಪುತ್ರ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೂರು ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಬಿಜೆಪಿ ಭಾರೀ ಕಾರ್ಯತಂತ್ರ ರೂಪಿಸಿದೆ.

ಆದರೆ, ಬಿಜೆಪಿಗೆ ಠಕ್ಕರ್ ಕೊಡಲು ಪ್ರತಿಪಕ್ಷಗಳು ಸಹ ಪ್ರತಿತಂತ್ರ ಹೆಣೆಯುತ್ತಿವೆ. ಮೂರು ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಕಾರ್ಯತಂತ್ರ ರೂಪಿಸುತ್ತಿವೆ. ಗ್ರಾಮ ಪಂಚಾಯತ್‌ಗಳಿಗೂ ಡಿಸೆಂಬರ್‌ನಲ್ಲಿ ಚುನಾವಣೆ ಘೋಷಣೆಯಾಗಲಿದೆ. ನಿಗದಿತ ಸಮಯದಲ್ಲೇ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿರುವುದರಿಂದ, ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ಈಗಾಗಲೇ ಜಿಲ್ಲಾಕಾರಿಗಳಿಗೆ ಸೂಚಿಸಲಾಗಿದೆ. ಮೂರು ಪಕ್ಷಗಳಿಗೆ ಈ ಚುನಾವಣೆಯೂ ಕೂಡ ದೊಡ್ಡ ಸವಾಲಾಗಿದೆ.

ABOUT THE AUTHOR

...view details