ಕರ್ನಾಟಕ

karnataka

ETV Bharat / city

ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ - ಕಲುಷಿತ ನೀರು ಸೇವನೆ

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಸಿಎಂ ರಿಲೀಫ್ ಫಂಡ್​ನಿಂದ ತಲಾ 5 ಲಕ್ಷ ರೂ. ಪರಿಹಾರವಾಗಿ ನೀಡಿದ್ದಾರೆ..

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Jun 6, 2022, 3:20 PM IST

Updated : Jun 6, 2022, 4:43 PM IST

ಬೆಂಗಳೂರು :ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬದವರಿಗೆ ರಾಜ್ಯ ಸರಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಈ ಪ್ರಕರಣವನ್ನು ಸರಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಸಿಎಂ ರಿಲೀಫ್ ಫಂಡ್‌ನಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ ಸಲ್ಲಿಸುವಂತೆ ಕೆಡಬ್ಲ್ಯೂಎಸ್‌ಎಸ್‌ಬಿ ಮುಖ್ಯ ಇಂಜಿನಿಯರ್​ಗೆ ಸೂಚಿಸಲಾಗಿದೆ. ಪ್ರಕರಣದ ಹಿನ್ನೆಲೆ ರಾಯಚೂರಿನ ಎಲ್ಲಾ ವಾರ್ಡ್​ಗಳ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕುಡಿಯುವ ನೀರಿನ ಸುರಕ್ಷತೆಯ ಬಗ್ಗೆ ಪ್ರಮಾಣೀಕರಣವಾಗಬೇಕು. ಅಧಿಕಾರಿಗಳ ಲೋಪದೋಷವಿದೆಯೇ ಎಂಬ ಬಗ್ಗೆಯೂ ಅಲ್ಲಿಯ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ತನಿಖೆಯನ್ನು ಕೂಡ ಕೈಗೊಳ್ಳಲಾಗುವುದು. ತಪ್ಪಿತಸ್ಥರಿದ್ದರೆ ಅವರ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಮೊಬೈಲ್ ಕ್ಲಿನಿಕ್​ಗೆ ಸಿಎಂ ಚಾಲನೆ: ಬೇರೆ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ಎಂದ ಬೊಮ್ಮಾಯಿ

Last Updated : Jun 6, 2022, 4:43 PM IST

ABOUT THE AUTHOR

...view details